ಅಕ್ರಮಗಳ ಬಗ್ಗೆ ಮಾಹಿತಿ ನೀಡಿ

0
abakari
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಚುನಾವಣೆ ಸಮಯದಲ್ಲಿ ಅಕ್ರಮ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿ ತಯಾರಿಸಿ, ಸಂಗ್ರಹಿಸಿ, ಮಾರಾಟ ಮಾಡುವಂತಹ ಅಕ್ರಮಗಳು ಮಾಡುವ ಹಾಗೂ ಇಂತಹ ಕಳ್ಳ ಭಟ್ಟಿಯನ್ನು ಮತದಾರರಿಗೆ ಸರಬರಾಜು ಮಾಡುವ ಸಾಧ್ಯತೆ ಇರುತ್ತದೆ. ಇವುಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಮಾಹಿತಿ ನೀಡಲು 18004250742 ಸಹಾಯವಾಣಿ ಆರಂಭಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣೆಯ ಸಂದರ್ಭದಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಮದ್ಯ ತಯಾರಿಕೆ, ಮಾರಾಟ ಮಾಡುವುದು ಕಂಡು ಬರುತ್ತದೆ. ನಕಲಿ ಮದ್ಯ ತಯಾರಿಕೆ, ಮಾರಾಟ ಮಾಡುವಂತಹ ಚಟುವಟಿಕೆಗಳು ತಮ್ಮ ವ್ಯಾಪ್ತಿ ಪ್ರದೇಶದ ಸುತ್ತ ಮುತ್ತ ಕಂಡುಬಂದಲ್ಲಿ ಸಂಬಂಧಪಟ್ಟ ಕಂಟ್ರೋಲ್ ರೂಮ್ ಟೋಲ್ ಫ್ರೀ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಲು ಅವರು ಕೋರಿದ್ದಾರೆ.

ಇಂತಹ ಘಟನೆಗಳು ಕಂಡುಬಂದಲ್ಲಿ ಈ ಕೆಳಗಿನ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಧಾರವಾಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರು-9449597083, ಧಾರವಾಡ ಉಪ ವಿಭಾಗದ ಉಪ ಅಧೀಕ್ಷಕರು-9449597083, ಹುಬ್ಬಳ್ಳಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು-9845046852, ಡಿ.ಸಿ.ಇ ಕಚೇರಿಯ ಅಬಕಾರಿ ನಿರೀಕ್ಷಕರು -9449597085, ಧಾರವಾಡ ಉಪ ವಿಭಾಗದ ಅಬಕಾರಿ ನಿರೀಕ್ಷಕರು -9972044752, ಹುಬ್ಬಳ್ಳಿ ಉಪ ವಿಭಾಗದ ಅಬಕಾರಿ ನಿರೀಕ್ಷಕರು-7026038079, ಧಾರವಾಡ ಅಬಕಾರಿ ನಿರೀಕ್ಷಕರು-9740770414, ಹುಬ್ಬಳ್ಳಿ ವಲಯ 1ರ ಅಬಕಾರಿ ನಿರೀಕ್ಷಕರು-9383477936, ಹುಬ್ಬಳ್ಳಿ ವಲಯ 2ರ ಅಬಕಾರಿ ನಿರೀಕ್ಷಕರು-9844617022, ಹುಬ್ಬಳ್ಳಿ ವಲಯ 3ರ ಅಬಕಾರಿ ನಿರೀಕ್ಷಕರು-9844035998, ಹುಬ್ಬಳ್ಳಿ ವಲಯ 4ರ ಅಬಕಾರಿ ನಿರೀಕ್ಷಕರು-9844035998, ನವಲಗುಂದ ವಲಯದ ಅಬಕಾರಿ ನಿರೀಕ್ಷಕರು-9902747011, ಕಲಘಟಗಿ ವಲಯದ ಅಬಕಾರಿ ನಿರೀಕ್ಷಕರು-9663436479, ಕುಂದಗೋಳ ವಲಯದ ಅಬಕಾರಿ ನಿರೀಕ್ಷಕರು-7760570183 ಈ ಸಹಾಯವಾಣಿ ಸಂಖ್ಯೆಗಳಿಗೆ ಕರೆಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಅಥವಾ ಅಕ್ರಮ ಚಟುವಟಿಕೆಗಳನ್ನು ನಡೆಸಲು ಮಾಡುವ ಕಳಭಟ್ಟಿ ಸರಾಯಿ, ನಕಲಿ ಮದ್ಯ ತಯಾರಿಕೆ ಸಂಗ್ರಹಣೆ ಮತ್ತು ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಸಾರ್ವಜನಿಕರು ಅಬಕಾರಿ ಇಲಾಖೆಗೆ ಮಾಹಿತಿ ನೀಡಬಹುದಾಗಿದಾಗಿದೆ.


Spread the love

LEAVE A REPLY

Please enter your comment!
Please enter your name here