HomeMUNICIPALITY NEWSಈ ವರ್ಷದ ಪ್ರಗತಿ ಸಾಧನೆಗಳ ಮಾಹಿತಿ ನೀಡಿ

ಈ ವರ್ಷದ ಪ್ರಗತಿ ಸಾಧನೆಗಳ ಮಾಹಿತಿ ನೀಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಮಗಳವಾರ ರೋಣ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಅಬ್ಬಿಗೇರಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾಮಗಾರಿ ಕಡತಗಳನ್ನು ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಅಳತೆ ಪರಿಶೀಲನೆ ನಡೆಸಿದರು. ಮುಂದಿನ ವರ್ಷಗಳಲ್ಲಿ ಕೈಗೊಳ್ಳುವ ಕೂಲಿ ಆಧಾರಿತ ಕಾಮಗಾರಿಯನ್ನು ಎಪ್ರಿಲ್ ತಿಂಗಳಲ್ಲಿ ಪ್ರಾರಂಭಿಸಲು ಸೂಚಿಸಿದರು.

ಹಿರೇಹಾಳ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಸ್ತೆ ಬದಿ ಸಸಿ ನೆಟ್ಟಿರುವ ಕಾಮಗಾರಿ ವೀಕ್ಷಿಸಿದ ಅವರು ಸರಿಯಾದ ರೀತಿಯಲ್ಲಿ ಸಸಿ ನೆಡುವುದು, ಅವುಗಳನ್ನು ಪೋಷಣೆ ಮಾಡುವದು ನಿಮ್ಮ ಕರ್ತವ್ಯ. ಯಾವ ಭಾಗದಲ್ಲಿ ಎಷ್ಟು ಸಸಿ ನೆಟ್ಟಿದ್ದೀರಿ, ಈ ವರ್ಷದಲ್ಲಿ ಏನೆಲ್ಲಾ ಪ್ರಗತಿ ಸಾಧಿಸಿದ್ದೀರಿ ಎಂಬ ಸಂಪೂರ್ಣ ಮಾಹಿತಿ ನೀಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಔಷಧ ದಾಸ್ತಾನು ಕೊಠಡಿಗೆ ಭೇಟಿ ನೀಡಿ, ಅವಧಿ ಮುಗಿದಿರುವ ಔಷಧಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್, ಸಹಾಯಕ ನಿರ್ದೇಶಕ ರಿಯಾಜ ಖತೀಬ್, ಅಬ್ಬಿಗೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಲೋಹಿತ ಎಮ್, ಹಿರೇಹಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ದಳವಾಯಿ ಸೇರಿದಂತೆ, ಎಡಿಪಿಸಿ ಕಿರಣಕುಮಾರ, ಖಿಅ,ಖಿIಇಅ,ಖಿಂ,ಃಈಖಿ, ಉಏಒ, ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

ರೋಣ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ, ಹೊರ ರೋಗಿಗಳ ವಿಭಾಗ, ಹೆರಿಗೆ ಕೊಠಡಿ ಮತ್ತು ಪುರುಷರ ವಾರ್ಡ್, ಡಯಾಲಿಸಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆಸ್ಪತ್ರೆಯನ್ನು ಶುಚಿಯಾಗಿ ಇಡಲು ಸೂಚನೆ ನೀಡಿದರಲ್ಲದೆ, ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!