ವಿಜಯಸಾಕ್ಷಿ ಸುದ್ದಿ, ಡಂಬಳ: ರೋಣ ಮತಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿ ಅಪಾರ ರಾಜಕೀಯ ಅನುಭವ ಹೊಂದಿರುವ ಶಾಸಕ ಜಿ.ಎಸ್. ಪಾಟೀಲರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮುಂಡರಗಿ ತಾಲೂಕು ಯೂಥ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಶರಣು ಬಂಡಿಹಾಳ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲರ ಜನಪರ ಸೇವೆ ಗುರುತಿಸಿ ಕಾಂಗ್ರೆಸ್ ಪಕ್ಷ ಜಿಲ್ಲೆಯ ಪಕ್ಷ ಸಂಘಟನೆ ಜವಾಬ್ದಾರಿ ನೀಡಿದ ಪರಿಣಾಮ ಈ ಹಿಂದೆ ಮೂರು ಬಾರಿ ಶಾಸಕರಾಗಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ, ನವೀಕರಿಸಬಹುದಾದ ಇಂಧನ ನಿಗಮ ಅಧ್ಯಕ್ಷರಾಗಿ ಹಲವಾರು ಅಭಿವೃದ್ಧಿ ಕಾರ್ಯ ನಿರ್ವಹಿಸಿದ್ದಾರೆ.
ಅಲ್ಲದೆ ಇವರ ಶಾಸಕತ್ವದ ಅವಧಿಯಲ್ಲಿ ರೋಣ ಮತಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿಗಳಾಗಿವೆ. ಭೀಕರ ಬರಗಾಲದ ಸಂದರ್ಭದಲ್ಲಿ ರೋಣ ತಾಲೂಕಿನಲ್ಲಿ ಸರ್ಕಾರದ ವತಿಯಿಂದ ಸಾವಿರಾರು ಕೆರೆಗಳನ್ನು ನಿರ್ಮಿಸಿದ್ದಲ್ಲದೆ ಶೈಕ್ಷಣಿಕವಾಗಿ ಸರ್ಕಾರದ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದ ಧೀಮಂತ ನಾಯಕರಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಮುಂಬರುವ ಸಚಿವ ಸಂಪುಟದ ವಿಸ್ತರಣೆಯ ಸಂದರ್ಭದಲ್ಲಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


