ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ CM ಪ್ರಮೋದ್ ಸಾವಂತ್ ಭೇಟಿ..!

0
Spread the love

ಉಡುಪಿ: ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಹೆಲಿಕಾಫ್ಟರ್ ವಿಮಾನವನ್ನು ಬಿಟ್ಟು ಸರಳವಾಗಿ ರೈಲಿನ ಮೂಲಕ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಸಾವಂತ್ ಅವರನ್ನು ಶಾಸಕ ಗುರುರಾಜ್ ಗಂಟಿಹೊಳೆ ಬರಮಾಡಿಕೊಂಡರು.

Advertisement

ಸ್ವಲ್ಪ ಕಾಲ ವಿಶ್ರಾಂತಿ ಪಡೆದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಮೂಕಾಂಬಿಕೆಯ ದರ್ಶನಗೈದರು. ಬಳಿಕ ಚಂಡಿಕಾ ಹೋಮದಲ್ಲಿ ಭಾಗಿಯಾದರು. ವಿಶೇಷ ಪೂಜೆ ನೆರವೇರಿಸಿ ಇತರೆ ಎರಡು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗೋವಾಕ್ಕೆ ಹಿಂದಿರುಗಿದ್ದಾರೆ.


Spread the love

LEAVE A REPLY

Please enter your comment!
Please enter your name here