ಬಾಗಲಕೋಟೆ: ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂ. ಮೌಲ್ಯದ ಕಳುವಾದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದಾರೆ.
2025-26ನೇ ಸಾಲಿನಲ್ಲಿ ಸಾರ್ವಜನಿಕರಿಂದ ಕಳುವಾಗಿದ್ದ 62 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 9.15 ಲಕ್ಷ ರೂಪಾಯಿಗಳಷ್ಟಾಗಿದೆ ಎಂದು ಅಂದಾಜಿಸಲಾಗಿದೆ.
ಅದೇ ರೀತಿ 2026ನೇ ಸಾಲಿನಲ್ಲಿ ಕಳೆದುಹೋದ 30 ಮೊಬೈಲ್‌ಗಳನ್ನು CEIR ಪೋರ್ಟಲ್ ತಂತ್ರಜ್ಞಾನ ಬಳಸಿ ಟ್ರ್ಯಾಕ್ ಮಾಡಿ ರಿಕವರಿ ಮಾಡಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ 4.19 ಲಕ್ಷ ರೂಪಾಯಿಗಳಾಗಿದೆ.
ಎರಡೂ ಸೇರಿ ಒಟ್ಟು 13.34 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಮೂಲ ಮಾಲೀಕರಿಗೆ ಮರಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯನ್ನು ಎಸ್‌ಪಿ ಸಿದ್ಧಾರ್ಥ ಗೋಯಲ್ ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.



