ದಿಢೀರ್ ಕುಸಿದ ಚಿನ್ನ, ಬೆಳ್ಳಿ ದರ: ಗೋಲ್ಡ್ ಪ್ರಿಯರು ಸಂತಸ – ಇಲ್ಲಿದೆ ಇಂದಿನ ರೇಟ್!

0
Spread the love

ಗೋಲ್ಡ್ ಪ್ರಿಯರು ನಿರಾಳರಾಗುವ ನ್ಯೂಸ್ ಒಂದು ಸಿಕ್ಕಿದ್ದು, ಸತತ ಏರಿಕೆ ಬಳಿಕ ಇಂದು ಚಿನ್ನ-ಬೆಳ್ಳಿ ದರ ದಿಢೀರ್ ಕುಸಿದಿದೆ. ಚಿನ್ನದ ಬೆಲೆ ಗ್ರಾಮ್​​ಗೆ 50 ರೂನಷ್ಟು ಕಡಿಮೆಯಾಗಿದೆ. ಬೆಳ್ಳಿ ಬೆಲೆ ಇನ್ನೂ ಭರ್ಜರಿ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 9,265 ರೂನಿಂದ 9,210 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,048 ರೂಗೆ ಇಳಿದಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,360 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.


Spread the love

LEAVE A REPLY

Please enter your comment!
Please enter your name here