ಬಂಗಾರಕ್ಕಿರುವ ಪ್ರಾಶಸ್ತ್ಯದ ಜೊತೆಗೆ ಬೆಲೆ ಏರಿಕೆ ಕೂಡ ಇಂದಿನ ದಿನಗಳಲ್ಲಿ ಸದ್ದುಮಾಡುತ್ತಿದೆ. ದಿನದಿಂದ ದಿನಕ್ಕೆ ಗಗನಕುಸುಮವಾಗುತ್ತಿರುವ ಬಂಗಾರ ಬೆಲೆ ಏರಿಸಿಕೊಳ್ಳುತ್ತಲೇ ಇದೆ. ಇತ್ತ ಬಂಗಾರದ ಬೆಲೆ ಎಂದು ಇಳಿಕೆಯಾಗುವುದೋ ಎಂದು ಗ್ರಾಹಕರು ಕಾಯುತ್ತಲೇ ಇದ್ದಾರೆ. ಇಂದು ಬೆಳ್ಳಿ ಹಾಗೂ ಬಂಗಾರದ ದರ ಹೇಗಿದೆ ಎಂಬುದನ್ನು ತಿಳಿದುಕೊಳ್ಳೋಣ
ಚಿನ್ನ, ಬೆಳ್ಳಿ ಬೆಲೆಗಳೆರಡೂ ಗುರುವಾರ ಹೆಚ್ಚಿವೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂ, ಬೆಳ್ಳಿ ಬೆಲೆ 1 ರೂ ಹೆಚ್ಚಿವೆ. 22 ಕ್ಯಾರಟ್ ಚಿನ್ನದ ಬೆಲೆ 11,135 ರೂ ಇದ್ದದ್ದು 11,175 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,191 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 150.50 ರೂನಿಂದ 151.50 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 164 ರೂಗೆ ಏರಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,11,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,21,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,11,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,150 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,400 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 6ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,191 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,175 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,143 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 151.50 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,191 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,175 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 151.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 11,175 ರೂ
- ಚೆನ್ನೈ: 11,250 ರೂ
- ಮುಂಬೈ: 11,175 ರೂ
- ದೆಹಲಿ: 11,190 ರೂ
- ಕೋಲ್ಕತಾ: 11,175 ರೂ
- ಕೇರಳ: 11,175 ರೂ
- ಅಹ್ಮದಾಬಾದ್: 11,180 ರೂ
- ಜೈಪುರ್: 11,190 ರೂ
- ಲಕ್ನೋ: 11,190 ರೂ
- ಭುವನೇಶ್ವರ್: 11,175 ರೂ


