ಗೋಲ್ಡ್ ಪ್ರಿಯರಿಗೆ ಇದು ನಿಜಕ್ಕೂ ಬ್ಯಾಡ್ ನ್ಯೂಸ್. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಹೊಸ ದಾಖಲೆ ಬರೆದಿವೆ.
ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 9,800 ರೂಗಳ ಮೈಲಿಗಲ್ಲು ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 10,800 ರೂ ಮೈಲಿಗಲ್ಲಿಗೆ ಬಹಳ ಸಮೀಪ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 98,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,07,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 98,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,050 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,970 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,230 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,050 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,970 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ.


