ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಭಾರತ ನಡುವಿನ ಸುಂಕ ಸಮರ ಸ್ಪಷ್ಟವಾದ ಬಳಿಕ ಷೇರು ಮಾರುಕಟ್ಟೆಯಲ್ಲಿ ಜಿಗಿತ ಕಂಡುಬಂದಿದ್ದು, ಇದರ ಪರಿಣಾಮವಾಗಿ ಚಿನ್ನದ ಮೇಲಿನ ಹೂಡಿಕೆಯೂ ಹೆಚ್ಚಳವಾಗಿದ್ದು, ಬೆಲೆ ಏರಿಕೆಗೆ ಮತ್ತಷ್ಟು ಬಲ ನೀಡಿದಂತಾಗಿದೆ.
ಫೆಬ್ರವರಿ 4, 2026 (ಬುಧವಾರ) ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನಕ್ಕೆ 660 ರೂಪಾಯಿ ಏರಿಕೆಯಾಗಿದೆ. ಇದರಿಂದ 10 ಗ್ರಾಂ ಚಿನ್ನದ ಬೆಲೆ 6,600 ರೂಪಾಯಿ ಹೆಚ್ಚಳಗೊಂಡಿದೆ. ಆ ಮೂಲಕ 1 ಗ್ರಾಂ ಚಿನ್ನದ ಬೆಲೆ 16,053 ರೂಪಾಯಿಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 1,60,530 ರೂಪಾಯಿಗೆ ಏರಿಕೆಯಾಗಿದೆ.
ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, 1 ಗ್ರಾಂಗೆ 605 ರೂಪಾಯಿ ಹಾಗೂ 10 ಗ್ರಾಂಗೆ 6,050 ರೂಪಾಯಿ ಹೆಚ್ಚಳವಾಗಿದೆ. ಇದರಿಂದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,47,150 ರೂಪಾಯಿಗೆ ತಲುಪಿದೆ.
ಬೆಂಗಳೂರು ಮಾರುಕಟ್ಟೆಯಲ್ಲಿ ಪ್ರಸ್ತುತ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 16,053 ರೂಪಾಯಿಯಾಗಿದ್ದು, 10 ಗ್ರಾಂ ಶುದ್ಧ ಚಿನ್ನದ ಬೆಲೆ 1,60,530 ರೂಪಾಯಿ ಇದೆ. ಈ ಬೆಲೆಯಲ್ಲಿ ಜಿಎಸ್ಟಿ ಸೇರಿಲ್ಲದ ಕಾರಣ, ಆಭರಣ ಮಳಿಗೆಗಳಲ್ಲಿ ಬೆಲೆಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ.
ಇತ್ತ ಬೆಳ್ಳಿ ದರದಲ್ಲೂ ಏರಿಕೆ ದಾಖಲಾಗಿದ್ದು, ಇಂದು ಪ್ರತಿ ಗ್ರಾಂಗೆ 40 ರೂಪಾಯಿ ಹೆಚ್ಚಳವಾಗಿದೆ. ಇದರೊಂದಿಗೆ ಬೆಳ್ಳಿಯ 1 ಗ್ರಾಂ ಬೆಲೆ 320 ರೂಪಾಯಿಯಾಗಿದ್ದು, ಪ್ರತಿ ಕೆಜಿಗೆ 40,000 ರೂಪಾಯಿ ಏರಿಕೆಯಾಗಿ, 1 ಕೆಜಿ ಬೆಳ್ಳಿ ಬೆಲೆ 3,20,000 ರೂಪಾಯಿಗೆ ತಲುಪಿದೆ.



