ಚಿನ್ನಾಭರಣ ಹಾಗೂ ಹಣ ವಂಚನೆ ಕೇಸ್: ಐಶ್ವರ್ಯಗೌಡ ವಿರುದ್ಧ ಡಿ.ಕೆ ಸುರೇಶ್‌ ದೂರು!

0
Spread the love

ಬೆಂಗಳೂರು:- ಚಿನ್ನಾಭರಣ ಹಾಗೂ ಹಣ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಐಶ್ವರ್ಯಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್‌ ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ.

Advertisement

ಘಟನೆ ಸಂಬಂಧ ಡಿಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ.

ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here