ದೇಶದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಕಂಡುಬಂದಿದ್ದ ಏರಿಳಿತಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ ಗ್ರಾಮ್ಗೆ ₹260 ಏರಿಕೆಯಾಗಿದೆ.
ವಿದೇಶಿ ಮಾರುಕಟ್ಟೆಗಳಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡುಬಂದಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಣಿಸಿಕೊಂಡಿದೆ. ಇತ್ತ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,50,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,38,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,320 ರೂ.
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ.
-
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ.
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ.
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ.



