ಬೀದಿಬದಿ ವ್ಯಾಪಾರಿಯ ಮಗಳಿಗೆ ಚಿನ್ನದ ಪದಕ

0
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ಪ್ರೇಮಾ ಶರಣಪ್ಪ ಮುಕ್ಕಣ್ಣವರ ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ ಎಂಬುದನ್ನು ತಮ್ಮ ಸಾಧನೆಯಿಂದ ತೋರಿಸಿಕೊಟ್ಟಿದ್ದಾರೆ. ಮೂಲತಃ ರೋಣ ತಾಲೂಕಿನ ಜಕ್ಕಲಿ ಗ್ರಾಮದವರಾದ ಪ್ರೇಮಾ ಅವರ ತಂದೆ ಶರಣಪ್ಪ ಮುದಿಯಪ್ಪ ಮುಕ್ಕಣ್ಣವರ ಹಾಗೂ ತಾಯಿ ಸಾವಿತ್ರಿ ಉದ್ಯೋಗ ಅರಸಿ ಬೆಂಗಳೂರಿಗೆ ವಲಸೆ ಬಂದಿದ್ದಾರೆ. ಪೀಣ್ಯ 2ನೇ ಹಂತದ ರಾಜಗೋಪಾಲ್ ನಗರದಲ್ಲಿ ನೆಲೆಸಿದ್ದು, ತಂದೆ ಜಾಲಹಳ್ಳಿ ಕ್ರಾಸ್‌ನಲ್ಲಿ ಬೀದಿಬದಿ ವಾಚ್ ಮಾರಾಟ ಮಾಡುತ್ತಾರೆ. ತಾಯಿ ಚಪಾತಿಗಳನ್ನು ಮಾಡಿ ಹೋಟೆಲ್‌ಗಳಿಗೆ ಪೂರೈಸುತ್ತಾರೆ.

Advertisement

ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದಲ್ಲಿ ಬೀದಿಬದಿ ವ್ಯಾಪಾರಿಯ ಮಗಳು 11 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಓದಿಗೆ ಬಡತನ ಅಡ್ಡಿಯಾಗದು ಎಂಬುದನ್ನು ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಪದವಿ ಮತ್ತು ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗಿದೆ.

ವಿವಿಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ಕನ್ನಡ ವಿಷಯದಲ್ಲಿ ವ್ಯಾಸಂಗ ಮಾಡಿರುವ ಎಸ್. ಪ್ರೇಮಾ 11 ಚಿನ್ನದ ಪದಕದ ಸಾಧನೆಗೆ ಪಾತ್ರರಾದವರು. ತಂದೆಯ ಮಾತಿನಂತೆ ಶಿಕ್ಷಕಿಯಾಗಬೇಕೆಂಬ ಹಂಬಲದಿಂದ ಕಷ್ಟಪಟ್ಟು ಓದಿದ್ದರಿಂದ ಹೆಚ್ಚು ಚಿನ್ನದ ಪದಕಗಳನ್ನು ಪಡೆಯಲು ಸಾಧ್ಯವಾಯಿತು ಎನ್ನುತ್ತಾರೆ ಪ್ರೇಮಾ. ಪ್ರಸ್ತುತ ರಾಜಾಜಿನಗರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡ್ ಪದವಿ ವ್ಯಾಸಂಗ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗುವ ಮತ್ತು ಕನ್ನಡ ಸಾಹಿತ್ಯದಲ್ಲಿಯೇ ಸಾಧನೆ ಮಾಡುವ ಗುರಿ ಹೊಂದಿದ್ದಾರೆ.


Spread the love

LEAVE A REPLY

Please enter your comment!
Please enter your name here