Gold Price: ಚಿನ್ನ-ಬೆಳ್ಳಿ ಬೆಲೆ ಭಾರೀ ಇಳಿಕೆ! ಖರೀದಿಗೂ ಮುನ್ನ ರೇಟ್ ನೋಡ್ಕೊಳ್ಳಿ

0
Spread the love

ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಐಶ್ವರ್ಯದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿರುತ್ತದೆ. ಇಂದು ಚಿನ್ನ-ಬೆಳ್ಳಿಯ ಬೆಲೆ ಭರ್ಜರಿ ಇಳಿಕೆಯಾಗಿದ್ದು, ಇಂದು ದರ ಎಷ್ಟಿದೆ ಅನ್ನೋದನ್ನು ಇಲ್ಲಿ ಕೊಡಲಾಗಿದೆ.

Advertisement

ಚಿನ್ನದ ಬೆಲೆ 10 ದಿನದಲ್ಲಿ 1,000 ರೂಗಳಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,410 ರೂನಿಂದ 11,225 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,246 ರೂಗೆ ಕುಸಿದಿದೆ. ಬೆಳ್ಳಿ ಬೆಲೆ ಹತ್ತು ದಿನದಲ್ಲಿ ಶೇ. 20ರಷ್ಟು ಕುಸಿದಿದೆ. ಇಂದು ಮಂಗಳವಾರ 4 ರೂಗಳಷ್ಟು ಕಡಿಮೆ ಆಗಿದೆ. ಬೆಲೆ ಈಗ 151 ರೂ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,22,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,225 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,184 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,225 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 152 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,225 ರೂ
  • ಚೆನ್ನೈ: 11,300 ರೂ
  • ಮುಂಬೈ: 11,225 ರೂ
  • ದೆಹಲಿ: 11,240 ರೂ
  • ಕೋಲ್ಕತಾ: 11,225 ರೂ
  • ಕೇರಳ: 11,225 ರೂ
  • ಅಹ್ಮದಾಬಾದ್: 11,230 ರೂ
  • ಜೈಪುರ್: 11,240 ರೂ
  • ಲಕ್ನೋ: 11,240 ರೂ
  • ಭುವನೇಶ್ವರ್: 11,225 ರೂ


Spread the love

LEAVE A REPLY

Please enter your comment!
Please enter your name here