ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಐಶ್ವರ್ಯದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿರುತ್ತದೆ.
ಅಲ್ಲದೆ, ಕಳೆದ ಒಂದೆರಡು ವಾರಗಳಿಂದ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿರುವುದನ್ನು ಗಮನಿಸಬಹುದು. ಭಾರತದಲ್ಲಿ ಎಲ್ಲ ವರ್ಗದ ಜನರೂ ಸಾಮಾನ್ಯವಾಗಿ ಚಿನ್ನ ಖರೀದಿ ಮಾಡುತ್ತಾರೆ. ಹಾಗಾಗಿ ಭಾರತದಲ್ಲಿ ಬಂಗಾರಕ್ಕೆ ಮಿಕ್ಕೆಡೆಗಿಂತ ಡಿಮಾಂಡ್ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ ಎನ್ನಬಹುದು.
ಭಾರತದಲ್ಲಿ ಮಾತ್ರವೇ ಹಳದಿ ಲೋಹದ ಬೆಲೆ ತಗ್ಗಿರುವುದು. ಬಜೆಟ್ನಲ್ಲಿ ಆಭರಣ ಭಾಗಗಳಿಗೆ ಆಮದು ಸುಂಕ ಕಡಿಮೆ ಮಾಡಿರುವುದರ ಪರಿಣಾಮ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗುವ ನಿರೀಕ್ಷೆ ಇತ್ತು. ಇದೇ ವೇಳೆ, ಬೆಳ್ಳಿ ಬೆಲೆ ಮತ್ತೆ ತನ್ನ ಯಥಾಸ್ಥಿತಿ ಕಾಯ್ದುಕೊಂಡಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 77,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 84,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 77,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,950 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 3ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,050 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,050 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,040 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,050 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,050 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 77,050 ರೂ
- ಚೆನ್ನೈ: 77,050 ರೂ
- ಮುಂಬೈ: 77,050 ರೂ
- ದೆಹಲಿ: 77,200 ರೂ
- ಕೋಲ್ಕತಾ: 77,050 ರೂ
- ಕೇರಳ: 77,050 ರೂ
- ಅಹ್ಮದಾಬಾದ್: 77,100 ರೂ
- ಜೈಪುರ್: 77,200 ರೂ
- ಲಕ್ನೋ: 77,200 ರೂ
- ಭುವನೇಶ್ವರ್: 77,050 ರೂ