ಸಾಮಾನ್ಯವಾಗಿ ಅಂತಾರಾಷ್ಟ್ರೀಯ ವಿದ್ಯಮಾನಗಳು, ಡಾಲರ್ ಸ್ಥಾನಮಾನ ಹಾಗೂ ಸ್ಥಳೀಯ ಬೇಡಿಕೆಗಳಿಗನುಗುಣವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಅಲ್ಲದೆ, ಇತ್ತೀಚೆಗೆ ಕೆಲವು ದೊಡ್ಡ ದೊಡ್ಡ ರಾಷ್ಟ್ರಗಳು ಹೆಚ್ಚು ಹೆಚ್ಚು ಚಿನ್ನ ಖರೀದಿ ಮಾಡುತ್ತಿರುವುದು ಪರೋಕ್ಷವಾಗಿ ಚಿನ್ನದ ದರದ ಮೇಲೆ ಪ್ರಭಾವ ಬೀರುತ್ತಿದೆ ಎನ್ನಲಾಗಿದೆ.
ಒಟ್ಟಿನಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಲು ಇದು ಅತಿ ಉತ್ತಮ ಸಮಯ ಎಂದು ಹಲವು ಪರಿಣಿತರು ವಿಶ್ಲೇಷಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಲವು ತೀವ್ರತರವಾದ ವಿದ್ಯಮಾನಗಳು ಜರುಗುತ್ತಿದ್ದು ಒಂದೆಡೆ ಕೆಲವು ದೇಶಗಳು ತಮ್ಮ ಚಿನ್ನ ಖರೀದಿಯನ್ನು ಹೆಚ್ಚಿಸುತ್ತಿವೆ.
ಡಿಸೆಂಬರ್ 13 ಶನಿವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13391 ರೂಪಾಯಿ ಇದ್ದು, ಇಂದು 27 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,33,910 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 270 ರೂ ಇಳಿಕೆ ಆಗಿದೆ.22 ಕ್ಯಾರೆಟ್ 1 ಗ್ರಾಂ ಬೆಲೆ 12,275 ರೂಪಾಯಿ ಇದ್ದು, ಇಂದು 25 ರೂ ಇಳಿಕೆ ಆಗಿದೆ.
10 ಗ್ರಾಂ ಬೆಲೆ 1,22,750 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 250 ರೂ ಕಡಿತ ಆಗಿದೆ.ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 13391 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,33,910 ರೂಪಾಯಿ ಇದೆ. ಈ ಬೆಲೆಯಲ್ಲಿ ಜಿಎಸ್‌ಟಿ ಸೇರಿಲ್ಲ, ಹೀಗಾಗಿ ಮಳಿಗೆಗಳಲ್ಲಿ ವ್ಯತ್ಯಾಸ ಇರಲಿದೆ. ಬೆಳ್ಳಿ ಬೆಲೆ ಇಂದು ಭಾರಿ ಇಳಿಕೆ ಆಗಿದ್ದು, 6 ರೂ ಕಡಿತ ಆಗಿ ಬೆಲೆ 198 ರೂ ಆಗಿದ್ದು, ಕೆಜಿಗೆ 1,98,,000 ರೂ ಇದೆ.



