ನವದೆಹಲಿ: ಈ ವಾರಾಂತ್ಯದಲ್ಲಿ ಚಿನ್ನ ಹಾಗೂ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ದೇಶದಾದ್ಯಂತ ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ.
ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಚಿನ್ನದ ದರ ಕುಸಿದಿದ್ದು, ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.
ಇತ್ತೀಚಿನ ದರ ಪರಿಷ್ಕರಣೆಯಂತೆ, 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಸುಮಾರು 2,750 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ದರ 1.40 ಲಕ್ಷ ರೂಪಾಯಿಗೆ ತಲುಪಿದೆ. ಅದೇ ರೀತಿ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,52,730 ರೂಪಾಯಿಯಾಗಿ ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದ್ದು, ಪ್ರತಿ ಗ್ರಾಂಗೆ ಸುಮಾರು 10 ರೂಪಾಯಿ ಕಡಿಮೆಯಾಗಿದೆ. ಪ್ರಸ್ತುತ 100 ಗ್ರಾಂ ಬೆಳ್ಳಿ ಬೆಲೆ 26,500 ರೂಪಾಯಿಯಷ್ಟಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,40,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,273 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,000 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,455 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,273 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,000 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ.



