ನಮ್ಮ ಹಿರಿಯರ ಕಾಲದಿಂದಲೂ ಚಿನ್ನ ಕೇವಲ ಒಂದು ಆಭರಣವಲ್ಲ, ಅದೊಂದು ಭಾವನಾತ್ಮಕ ಬೆಸುಗೆ. ಹೂಡಿಕೆಯ ವಿಚಾರಕ್ಕೆ ಬಂದರೆ, ಚಿನ್ನವೇ ನಮ್ಮ “ಆಪತ್ಬಾಂಧವ”. ಕಷ್ಟಕಾಲದಲ್ಲಿ ಕೈ ಹಿಡಿಯುವುದೇ ಬಂಗಾರ ಎಂಬ ಮಾತಿದೆ. ಇದೇ ಕಾರಣಕ್ಕೆ, ಕೈಯಲ್ಲಿ ನಾಲ್ಕು ಕಾಸು ಸೇರಿದರೆ ಒಂದು ಗ್ರಾಂ ಆದ್ರೂ ಚಿನ್ನ ತೆಗೆದಿಟ್ಟುಕೋ ಎಂದು ಹಿರಿಯರು ಸಲಹೆ ನೀಡುತ್ತಾರೆ. ಹಾಗಾದರೆದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ? ನೋಡೋಣ ಬನ್ನಿ.
ಚಿನ್ನದ ಬೆಲೆ ಇವತ್ತು ಸೋಮವಾರ ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 9,170 ರೂನಿಂದ 9,180 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 10,015 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು ಹಾಗೂ ಇತರ ಕೆಲವೆಡೆ 116 ರೂ ಇದ್ದರೆ, ಚೆನ್ನೈ ಇತ್ಯಾದಿ ಕಡೆ 126 ರೂ ಇದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 21ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,150 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,110 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,150 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ