ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ: ಇಲ್ಲಿದೆ ನೋಡಿ ಇಂದಿನ ಚಿನ್ನ-ಬೆಳ್ಳಿ ದರ ವಿವರ!

0
Spread the love

ಚಿನ್ನಕ್ಕೆ ಮೊದಲಿನಿಂದಲೂ ಭಾರತದಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. ಪ್ರಾಚೀನ ಕಾಲದಿಂದಲೂ ಚಿನ್ನವನ್ನು ಮೌಲ್ಯಯುತವಾದ ವಸ್ತು ಎಂದು ಪರಿಗಣಿಸಲಾಗಿದೆ. ಚಿನ್ನವನ್ನು ಭಾರತದಲ್ಲಿ ಲಕ್ಷಿ ದೇವಿಯ ಸ್ವರೂಪ ಎನ್ನಲಾಗಿದ್ದು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕ ಎಂದೇ ಪರಿಗಣಿಸಲಾಗುತ್ತದೆ ಹಾಗೂ ಚಿನ್ನದಿಂದ ಮಾಡಲಾದ ಆಭರಣಗಳಿಗೆ ಎಲ್ಲಿಲ್ಲದ ಬೇಡಿಕೆ ಭಾರತದಲ್ಲಿರುತ್ತದೆ.

Advertisement

ಚಿನ್ನ ಮತ್ತು ಬೆಳ್ಳಿ ಬೆಲೆಗಳ ನಿರಂತರ ಏರಿಕೆ ಗುರುವಾರವೂ ಮುಂದುವರಿದಿದೆ. ಇಂದು ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಏರಿದರೆ, ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,360 ರೂನಿಂದ 11,380 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,415 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 161 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ 171 ರೂ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,13,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,13,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,415 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,380 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,311 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 161 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,415 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,380 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 161 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,380 ರೂ
  • ಚೆನ್ನೈ: 11,380 ರೂ
  • ಮುಂಬೈ: 11,380 ರೂ
  • ದೆಹಲಿ: 11,395 ರೂ
  • ಕೋಲ್ಕತಾ: 11,380 ರೂ
  • ಕೇರಳ: 11,380 ರೂ
  • ಅಹ್ಮದಾಬಾದ್: 11,385 ರೂ
  • ಜೈಪುರ್: 11,395 ರೂ
  • ಲಕ್ನೋ: 11,395 ರೂ
  • ಭುವನೇಶ್ವರ್: 11,380 ರೂ

Spread the love

LEAVE A REPLY

Please enter your comment!
Please enter your name here