ಮತ್ತೆ ಚಿನ್ನ ತನ್ನ ಬೆಲೆ ಏರಿಕೆಯ ನಾಗಾಓಟವನ್ನು ಮುಂದುವರೆಸಿದಂತಿದೆ. ಚಿನ್ನಕ್ಕೆ ಭಾರತದಂತಹ ದೇಶದಲ್ಲಿ ಬೇಡಿಕೆ ಇದ್ದೆ ಇರುತ್ತದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕವೆಂದೇ ಭಾವಿಸಲಾಗಿದೆ. ಹಾಗಾಗಿ, ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ.
ಚಿನ್ನದ ಬೆಲೆ 115 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 11,070 ರೂ ಇದ್ದದ್ದು 11,185 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,202 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 157 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ 167 ರೂ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,11,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,22,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,11,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,700 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 7ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,202 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,152 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 157 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,202 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 157 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 11,185 ರೂ
- ಚೆನ್ನೈ: 11,185 ರೂ
- ಮುಂಬೈ: 11,185 ರೂ
- ದೆಹಲಿ: 11,200 ರೂ
- ಕೋಲ್ಕತಾ: 11,185 ರೂ
- ಕೇರಳ: 11,185 ರೂ
- ಅಹ್ಮದಾಬಾದ್: 11,190 ರೂ
- ಜೈಪುರ್: 11,200 ರೂ
- ಲಕ್ನೋ: 11,200 ರೂ
- ಭುವನೇಶ್ವರ್: 11,185 ರೂ