ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಚಿನ್ನಾಭರಣ ದರ ಹೀಗಿದೆ

0
Spread the love

ಹೆಂಗಳೆಯರನ್ನು ಬಲು ಆಕರ್ಷಿಸುವ ಫಳ ಫಳ ಹೊಳೆಯುವ ಚಿನ್ನವನ್ನು ಕೊಳ್ಳಬೇಕೆಂದರೆ ಜೇಬು ಸಹ ಫಳ ಫಳ ಹೊಳೆಯಬೇಕು ಎನ್ನುವಂತಾಗಿದೆ. ಹೌದು, ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿರುವ ಅಪರೂಪದ ಹಳದಿ ಲೋಹ ದಿನಗಳೆದಂತೆ ತುಟ್ಟಿಯಾಗುತ್ತಲೇ ಹೋಗುತ್ತಿದೆ.

Advertisement

ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 125 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 3 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 11,410 ರೂನಿಂದ 11,535 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,584 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 164 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 172 ರೂ ಆಗಿದೆ.

 ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,840 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,584 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,535 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,438 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 164 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,584 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,535 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 164 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,535 ರೂ
  • ಚೆನ್ನೈ: 11,630 ರೂ
  • ಮುಂಬೈ: 11,535 ರೂ
  • ದೆಹಲಿ: 11,550 ರೂ
  • ಕೋಲ್ಕತಾ: 11,535 ರೂ
  • ಕೇರಳ: 11,535 ರೂ
  • ಅಹ್ಮದಾಬಾದ್: 11,540 ರೂ
  • ಜೈಪುರ್: 11,550 ರೂ
  • ಲಕ್ನೋ: 11,550 ರೂ
  • ಭುವನೇಶ್ವರ್: 11,535 ರೂ

Spread the love

LEAVE A REPLY

Please enter your comment!
Please enter your name here