ಗುರುವಾರ ಏರಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಗಿದ್ದು, ಚಿನ್ನದ ಪ್ರಿಯರು ಖುಷ್ ಆಗಿದ್ದಾರೆ.
ಸಿಕ್ಕಾಪಟ್ಟೆ ಏರುತ್ತಾ ಬಂದಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಅಪರೂಪಕ್ಕೆ ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,08,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,18,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,08,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,100 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,804 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,820 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 8,853 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,804 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,820 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ.