2025ರ ಆರಂಭದಿಂದಲೇ ಚಿನ್ನ ಮತ್ತು ಬೆಳ್ಳಿ ಬೆಲೆಗಳು ರಾಕೆಟ್‌ನಂತೆ ಏರಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದೀಗ ಡಬಲ್ ಆಗಿದೆ. ಬಂಗಾರ ಪ್ರಿಯರಿಗೆ ದೊಡ್ಡ ಹೊಡೆತ ಬಿದ್ದಿದೆ. ಮದುವೆ ಮುಂಜಿ ಹಬ್ಬಕ್ಕೆ ಚಿನ್ನ ಬೆಳ್ಳಿ ಖರೀದಿ ಮಾಡಬೇಕು ಅಂದುಕೊಂಡವರ ಕನಸಿಗೆ ಎಳ್ಳು ನೀರು ಬಿಟ್ಟಂತಾಗಿದೆ. ಇದು ಅನೇಕರಿಗೆ ಆಭರಣ ಖರೀದಿಯನ್ನು ಕಷ್ಟಕರಗೊಳಿಸಿದೆ.
ಇದೀಗ ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಭರ್ಜರಿ ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 255 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,720 ರೂ ಇದ್ದದ್ದು 11,465 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,508 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 173 ರೂನಿಂದ 169 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 183 ರೂನಿಂದ 175 ರೂಗೆ ಇಳಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,25,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,14,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 16,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 16ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,508 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,465 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,381 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 169 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,508 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,465 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 169 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 11,465 ರೂ
- ಚೆನ್ನೈ: 11,550 ರೂ
- ಮುಂಬೈ: 11,465 ರೂ
- ದೆಹಲಿ: 11,480 ರೂ
- ಕೋಲ್ಕತಾ: 11,465 ರೂ
- ಕೇರಳ: 11,465 ರೂ
- ಅಹ್ಮದಾಬಾದ್: 11,470 ರೂ
- ಜೈಪುರ್: 11,480 ರೂ
- ಲಕ್ನೋ: 11,480 ರೂ
- ಭುವನೇಶ್ವರ್: 11,465 ರೂ



