ಚಿನ್ನದ ಬೆಲೆ ಶನಿವಾರದಂತೆ ಭಾನುವಾರವೂ ಏರಿಕೆ ಆಗಿದ್ದು, ಗೋಲ್ಡ್ ಪ್ರಿಯರು ಕಂಗಾಲಾಗಿದ್ದಾರೆ.
ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ 20 ರೂ ಅಲ್ಪ ಹೆಚ್ಚಳ ಹೊಂದಿದೆ. ಹತ್ತು ದಿನದಲ್ಲಿ ಬೆಲೆ ಗ್ರಾಮ್ಗೆ 220 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,19,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,30,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,19,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 19,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,900 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 7ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,015 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,930 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,761 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,015 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,930 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ.


