ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಆಗಿದೆ.
ಚಿನ್ನದ ಬೆಲೆ ಗ್ರಾಮ್ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದ್ದು, ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,56,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,43,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರವರಿ 8ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,660 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,355 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,745 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,660 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,355 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ.



