ಕಳೆದ ಕೆಲವು ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೆಚ್ಚುತ್ತಿವೆ. ಇದ್ರೊಂದಿಗೆ, ಹೂಡಿಕೆದಾರರು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇತ್ತೀಚೆಗೆ ಅವುಗಳತ್ತ ವಿಶೇಷ ಗಮನ ಹರಿಸುತ್ತಿದ್ದಾರೆ. ಚಿನ್ನ, ಬೆಳ್ಳಿ ಪ್ರತಿಯೊಬ್ಬರಿಗೆ ಅವಶ್ಯಕವಾಗಿದೆ. ಮದುವೆಗಳಿಗೆ ಆಭರಣ ಬೇಕು. ಹೂಡಿಕೆಗೂ ಚಿನ್ನ ಬೆಸ್ಟ್ ಎನ್ನಲಾಗ್ತಿತ್ತು.
ಅದಲ್ಲದೆ ಅನೇಕ ಮಂದಿ ವಿಶೇಷವಾಗಿ ಮಹಿಳೆಯರು ಸಮಯ ಸಿಕ್ಕಾಗಲೆಲ್ಲ ಚಿನ್ನ ಖರೀದಿಸಲು ಇಚ್ಛಿಸುತ್ತಾರೆ. ಹೀಗಾಗಿ ಚಿನ್ನ ಬೆಳ್ಳಿಯ ದರ ಕಡಿಮೆಯಾಗುವುದನ್ನೇ ನಿರೀಕ್ಷೆ ಮಾಡುತ್ತಿರುತ್ತಾರೆ. ಇಂದು ಕೆಲವು ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗಾಗಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಇಂದಿನ ಚಿನ್ನದ ದರ ವಿವರ ಇಲ್ಲಿ ಕೊಡಲಾಗಿದೆ.
ನಿನ್ನೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಬಹುತೇಕ ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 12,350 ರೂನಿಂದ 12,270 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,386 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 199 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 211 ರೂ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,22,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,33,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,22,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 19,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 21,100 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 16ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,386 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,270 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,039 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,386 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,270 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 12,270 ರೂ
- ಚೆನ್ನೈ: 12,350 ರೂ
- ಮುಂಬೈ: 12,270 ರೂ
- ದೆಹಲಿ: 12,285 ರೂ
- ಕೋಲ್ಕತಾ: 12,270 ರೂ
- ಕೇರಳ: 12,270 ರೂ
- ಅಹ್ಮದಾಬಾದ್: 12,275 ರೂ
- ಜೈಪುರ್: 12,285 ರೂ
- ಲಕ್ನೋ: 12,285 ರೂ
- ಭುವನೇಶ್ವರ್: 12,270 ರೂ



