ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿದ್ದರೂ, ಮೂಲ್ಯ ಲೋಹಗಳ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡುಬಂದಿದೆ. ವಿಶೇಷವಾಗಿ ಚಿನ್ನದ ದರ ಕುಸಿದರೆ, ಬೆಳ್ಳಿ ಬೆಲೆ ತಟಸ್ಥವಾಗಿಯೇ ಉಳಿದಿದೆ.
ಏಪ್ರಿಲ್ 7, 2026ರ ಮಂಗಳವಾರದಂದು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 10 ಗ್ರಾಂಗೆ 820 ರೂ ಇಳಿಕೆಯಾಗಿದ್ದು, ಪ್ರಸ್ತುತ ದರ 1,49,840 ರೂಪಾಯಿಗೆ ತಲುಪಿದೆ. 1 ಗ್ರಾಂ ಚಿನ್ನದ ಬೆಲೆ 82 ರೂ ಇಳಿಕೆಯಾಗಿದ್ದು, 14,984 ರೂ ಆಗಿದೆ.
ಇನ್ನೊಂದೆಡೆ 22 ಕ್ಯಾರೆಟ್ ಚಿನ್ನದ ದರದಲ್ಲೂ ಇಳಿಕೆ ದಾಖಲಾಗಿದೆ. 1 ಗ್ರಾಂಗೆ 75 ರೂ ಇಳಿಕೆಯಾಗಿದ್ದು, 13,735 ರೂ ಆಗಿದೆ. 10 ಗ್ರಾಂಗೆ 750 ರೂ ಇಳಿಕೆಯಾಗಿದ್ದು, 1,37,350 ರೂಪಾಯಿಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. 1 ಗ್ರಾಂ ಬೆಲೆ 250 ರೂ ಇದ್ದು, 1 ಕೆಜಿ ಬೆಲೆ 2,50,000 ರೂಪಾಯಿಯಾಗಿ ಮುಂದುವರಿದಿದೆ.
ಇರಾನ್–ಅಮೆರಿಕ ಸಂಘರ್ಷದ ಪರಿಣಾಮವಾಗಿ ಡಾಲರ್ ಮೌಲ್ಯದಲ್ಲಿ ಏರಿಳಿತ ಉಂಟಾಗುತ್ತಿದ್ದು, ಇದರ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅನಿಶ್ಚಿತತೆ ಮುಂದುವರಿದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.



