ನವದೆಹಲಿ: ಚಿನ್ನ ಖರೀದಿಸುವವರಿಗೆ ವಾರಾಂತ್ಯದಲ್ಲಿ ಸ್ವಲ್ಪ ರಿಲೀಫ್ ಸಿಕ್ಕಿದೆ.
ಶುಕ್ರವಾರ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿ ದರವೂ ಕಡಿಮೆಯಾಗಿದೆ.
ಶುಕ್ರವಾರ ಪ್ರತಿ ಗ್ರಾಂ ಚಿನ್ನದ ದರ 145 ರೂಪಾಯಿ ಏರಿಕೆಯಾಗಿತ್ತು. ಇದೀಗ ಪ್ರತಿ ಗ್ರಾಂಗೆ 45 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯೂ ಪ್ರತಿ ಗ್ರಾಂಗೆ 5 ರೂಪಾಯಿ ಕಡಿಮೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,44,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,32,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,825 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ.



