ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ಗೆ ಮಾ.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಮಾರ್ಚ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕಳೆದ ರಾತ್ರಿ ದುಬೈನಿಂದ ಕೆಂಪೇಗೌಡ ಏರ್ಪೋರ್ಟ್ಗೆ ರನ್ಯಾ ಬಂದಿದ್ದರು. ಅಲ್ಲಿಯೇ ಅವರನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ಸಲುವಾಗಿ ರನ್ಯಾ ಅವರನ್ನು ವಶಕ್ಕೆ ನೀಡುವಂತೆ ಡಿಆರ್ಐ ಅಧಿಕಾರಿಗಳು ಕೇಳಿದ್ದಾರೆ. ಆದರೆ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಪಡಿಸುವುದಕ್ಕೂ ಮುನ್ನ ನಟಿಯ ವೈದ್ಯಕೀಯ ಪರೀಕ್ಷೆ ಮಾಡಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆದಿದೆ.