ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಆಪ್ತ ಅರೆಸ್ಟ್.!

0
Spread the love

ಚಿಕ್ಕಮಗಳೂರು: ಗೋಲ್ಡ್​ ಸ್ಮಗ್ಲಿಂಗ್ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿರುವ ರನ್ಯಾ ರಾವ್​ಗೆ ದಿನದಿಂದ ದಿನಕ್ಕೆ ಕಾನೂನಿನ ಕುಣಿಕೆ ಬಿಗಿಯಾಗುತ್ತಾ ಸಾಗುತ್ತಿದೆ. ಸದ್ಯ ಈ ಸ್ಮಗ್ಲಿಂಗ್​ ಕೇಸ್​ನ್ನು ಮೂರು ಆಯಾಮಗಳಲ್ಲಿ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಇನ್ನು ನಟಿ ರನ್ಯಾ ರಾವ್ ಆಪ್ತನೊಬ್ಬನನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement

ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯ ಕಾರು ಚಾಲಕ ದೀಪಕ್‍ನನ್ನು ಅಧಿಕಾರಿಗಳು ಗುರುವಾರ ಸಂಜೆ ವಶಕ್ಕೆ ಪಡೆದಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ದೀಪಕ್‌ ಪಾತ್ರ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಎಲ್ಲಾ ಆಯಾಮಗಳಲ್ಲೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಮಾ. 3 ರಂದು ದುಬೈನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ವೇಳೆ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದು ಹೇಳಿಕೊಂಡಿದ್ದಳು. ಅಲ್ಲದೇ ರನ್ಯಾಳನ್ನು ತಪಾಸಣೆ ಇಲ್ಲದೇ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್‌ಸ್ಟೇಬಲ್ ಬಸವರಾಜ್ ತೆರಳಿದ್ದರು.


Spread the love

LEAVE A REPLY

Please enter your comment!
Please enter your name here