ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರ ಜಾಮೀನು ಅರ್ಜಿ ವಜಾ!

0
Spread the love

ಬೆಂಗಳೂರು:- ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ನ್ಯಾ. ವಿಶ್ವನಾಥ್ ಸಿ. ಗೌಡರ್ ಅವರು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದ್ದಾರೆ. ಡಿಆರ್‌ಐ ಪರ ವಕೀಲರು ರನ್ಯಾಗೆ ಜಾಮೀನು ನೀಡಬಾರದು ಎಂದು ಪ್ರಬಲವಾಗಿ ವಾದ ಮಂಡಿಸಿದ್ದರು. ಈ ವಾದವನ್ನು ಕೋರ್ಟ್‌ ಪುರಸ್ಕರಿಸಿದೆ.

ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಾಡಿದ್ದರು. ಡಿಆರ್‌ಐ‌ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಹೆಣ್ಣು ಎಂದೂ ನೋಡದೇ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ. ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ರನ್ಯಾ ಪಾತ್ರ ಇಲ್ಲ‌. ತನಿಖೆಗೆ ಸಹಕಾರ‌ ನೀಡುತ್ತಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಆದ್ರೆ ಕೋರ್ಟ್ ಜಾಮೀನು ಕೊಡಲು ನಿರಾಕರಿಸಿದೆ. ಪ್ರಕರಣದಲ್ಲಿ ಅಂತರರಾಷ್ಟ್ರೀಯ ಲಿಂಕ್‌ಗಳಿವೆ. ಒಂದು ವರ್ಷದ ಅವಧಿಯಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿದ್ದಾಳೆ. ಇದರಿಂದ ಅಂದಾಜು 38% ಕಸ್ಟಮ್ಸ್ ಸುಂಕ ವಂಚನೆ ಆಗಿರಬಹುದು. ಜೈಲಿನಿಂದ ಹೊರಬಂದಲ್ಲಿ ಸಾಕ್ಷಿ ನಾಶವಾಗುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.


Spread the love

LEAVE A REPLY

Please enter your comment!
Please enter your name here