ಬೆಂಗಳೂರು:- ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಫ್ಲಾಟ್ ಮೇಲೆ ಡಿಆರ್‌ಐ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸಿದರು. ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ಅಧಿಕಾರಿಗಳು, ಸೀಜ್ ಮಾಡಿದ್ದಾರೆ.
ಲ್ಯಾವೆಲ್ಲಿ ರಸ್ತೆಯ ಮನೆ ಮೇಲೆ ನಡೆಸಿದ ದಾಳಿಯಲ್ಲಿ ಬರೋಬ್ಬರಿ 2.06 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 2.67 ಕೋಟಿ ಹಣವನ್ನು DRI ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂದವಾಣಿ ಮ್ಯಾನ್ಸನ್‌ನಲ್ಲಿ ನಟಿ ವಾಸವಿದ್ದರು. ತಿಂಗಳಿಗೆ 4.5 ಲಕ್ಷ ಬಾಡಿಗೆ ಕಟ್ಟುತ್ತಿದ್ದರು ಎನ್ನಲಾಗಿದೆ.
ಘಟನೆ ಹಿನ್ನೆಲೆ:
ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ಬೆಂಗಳೂರು ಏರ್ಪೋರ್ಟ್ ನಲ್ಲಿ ಐಪಿಎಸ್ ಅಧಿಕಾರಿ ಸಂಬಂಧಿಯೂ ಆಗಿರುವ ನಟಿ ರನ್ಯಾ ರಾವ್ ಅವರನ್ನು ನಿನ್ನೆ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ನಟಿಯನ್ನು ವಶಕ್ಕೆ ಪಡೆಯಲಾಗಿತ್ತು.