ಬೆಂಗಳೂರು: ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
Advertisement
ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿಯೇ ಇರಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು.
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರನ್ಯಾರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್‌ಐ ಅಧಿಕಾರಿಗಳು ರನ್ಯಾರಾವ್‌ರನ್ನ ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2 ಬಾರಿ ರನ್ಯಾರಾವ್ ಜಾಮೀನು ಅರ್ಜಿ ವಜಾ ಆಗಿದೆ.