ಬೆಂಗಳೂರು:- ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ಮಂಗಳವಾರ ಅಂತ್ಯವಾಗಿದ್ದು, ಇಂದು ತೀರ್ಪು ಹೊರ ಬೀಳುವ ಸಾಧ್ಯತೆ ಇದೆ.
12 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ಬಂಧನಕ್ಕೆ ಒಳಗಾಗಿದ್ದ ರನ್ಯಾ ರಾವ್‌ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಶಾಕ್ ನೀಡಿತ್ತು. ಮತ್ತೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಅಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ವೇಳೆ ಚಿನ್ನ ಕಳ್ಳ ಸಾಗಾಣೆ ಮಾಡೋದಕ್ಕೆ ಹವಾಲ ವಹಿವಾಟು ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಡಿಆರ್‌ಐ ಮಾಡಿತ್ತು. ಸುದೀರ್ಘ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬೀಳಲಿದೆ.
ಗೋಲ್ಡ್ ಸಗ್ಲಿಂಗ್ ಕೇಸ್ ನಲ್ಲಿ ಮೂರನೇ ಆರೋಪಿ ಅರೆಸ್ಟ್:-
ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಡಿಆರ್ ಐ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಸಾಹಿಲ್ ಜೈನ್ ಎಂದು ಗುರುತಿಸಲಾಗಿದೆ. ಈತ ಬಳ್ಳಾರಿ ಮೂಲದವ ಎನ್ನಲಾಗಿದೆ. ಪ್ರಕರಣದಲ್ಲಿ ಈಗಾಗಲೇ ರನ್ಯಾ ರಾವ್, ತರುಣ್ ಬಂಧಿಸಿರುವ ಡಿಆರ್ ಐ, ಇದೀಗ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮಾರ್ಚ್ 29 ರವರೆಗೂ ಕಸ್ಟಡಿಗೆ ಪಡೆದಿದೆ.