• About
  • Advertise
  • Privacy & Policy
  • Contact
Sunday, October 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

Vijaya Sakshi by Vijaya Sakshi
March 25, 2025
in Gadag News
0
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಶಿಕ್ಷಣಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳ ಆಶ್ರಮದಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಟ್ಯೂಶನ್ ಪಡೆದುಕೊಂಡು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನವು ವಿಶೇಷ ಪುರಸ್ಕಾರವನ್ನು ನೀಡಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೊದಲ 10 ರ‍್ಯಾಂಕ್‌ಗಳಲ್ಲಿ ತೇರ್ಗಡೆಯಾಗುವ ಆಶ್ರಮದಲ್ಲಿ ಟ್ಯೂಶನ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗೆ 1 ಲಕ್ಷ ರೂ.ಗಳ ಪುರಸ್ಕಾರ, 100 ರ‍್ಯಾಂಕ್‌ಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗೆ 50 ಸಾವಿರ ರೂ.ಗಳ ಪುರಸ್ಕಾರ, 500 ಸ್ಥಾನಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗೆ 25 ಸಾವಿರ ರೂ.ಗಳ ಪುರಸ್ಕಾರ ಹಾಗೂ ಒಂದು ಸಾವಿರ ಸ್ಥಾನಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗೆ 10 ಸಾವಿರ ರೂ.ಗಳ ಪುರಸ್ಕಾರ ನೀಡಿ ಗೌರವಿಸಲಾಗುವದು.

ಟ್ಯೂಶನ್ ಹಾಗೂ ಪ್ರತಿಭಾ ಪುರಸ್ಕಾರಗಳಿಂದ ವಂಚಿತರಾಗುವ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕೆಂಬ ಮಹದಾಸೆಯನ್ನು ಹೊಂದಿದ್ದ ಬಿ.ಜಿ. ಅಣ್ಣಿಗೇರಿ ಗುರುಗಳ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಭಾ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಪೂಜ್ಯ ಜ. ಡಾ. ಸಿದ್ದರಾಮ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಅಭ್ಯಾಸದಲ್ಲಿ ತೊಡಗಬೇಕೆಂಬುದು ಪ್ರತಿಷ್ಠಾನದ ಸದಾಶಯವಾಗಿದೆ.

ಗದಗ ಪರಿಸರದಲ್ಲಿ ಕಳೆದ 60 ವರ್ಷಗಳಿಂದ 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದವರಿಗೆ ಉಚಿತ ಟ್ಯೂಶನ್ ಎಂಬ ಹೆಗ್ಗಳಿಕೆಯೊಂದಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಬಿ.ಜಿ. ಅಣ್ಣಿಗೇರಿ ಗುರುಗಳ ನಂತರವೂ ಅವರ ಶಿಷ್ಯ ಬಳಗ, ಗುರುಬಳಗ ಆಶ್ರಮದಲ್ಲಿ ಟ್ಯೂಶನ್ ಹೇಳುವ ಕೈಂಕರ್ಯವನ್ನು ಮುನ್ನಡೆಸುವ ಮೂಲಕ ಗುರುನಮನಕ್ಕೆ ಮುಂದಾಗಿದ್ದಾರೆ.

8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಬೇಸಿಗೆಯ ಟ್ಯೂಶನ್ ವರ್ಗಗಳನ್ನು ಆರಂಭಿಸಲಿದೆ. ವಿಶೇಷವಾಗಿ 8ನೇ ತರಗತಿಗೆ ಪ್ರವೇಶ ಪಡೆದಿರುವ ಗ್ರಾಮೀಣ ಪ್ರದೇಶದ ಆಯ್ದ 20 ಬಡ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೂ ಅಣ್ಣಿಗೇರಿ ಗುರುಗಳ ಆಶ್ರಮದಲ್ಲಿ ಉಚಿತ ಟ್ಯೂಶನ್‌ನೊಂದಿಗೆ ಉಚಿತ ಊಟ ಮತ್ತು ಉಚಿತ ವಸತಿ ಸೌಲಭ್ಯವಿದೆ. (ವಿದ್ಯಾರ್ಥಿನಿಯರಿಗೆ ವಸತಿಗೆ ಅವಕಾಶವಿಲ್ಲ)

ಅನುಭವಿ ಶಿಕ್ಷಕರ ತಂಡವು ಉಚಿತ ಟ್ಯೂಶನ್ ಹೇಳಲಿದ್ದು, ಆಸಕ್ತ ವಿದ್ಯಾರ್ಥಿಗಳು ಬಿ.ಜಿ. ಅಣ್ಣಿಗೇರಿ ಗುರುಗಳ ಆಶ್ರಮ, ಡಾ. ಪಂ. ಪುಟ್ಟರಾಜ ಗವಾಯಿಗಳ ಪುತ್ಥಳಿ ಹತ್ತಿರ (ಭೂಮರಡ್ಡಿ ಸರ್ಕಲ್) ಗದಗ, ಫೋನ್ ನಂ: 9902652860, 9481008700, 9480555766, 8495877018 ಇಲ್ಲಿಗೆ ಸಂಪರ್ಕಿಸಿ ಹೆಸರು ನೋಂದಾಯಿಸಲು ಶಿವಕುಮಾರ ಪಾಟೀಲ ತಿಳಿಸಿದ್ದಾರೆ.

Tags: annigeri pratishtanaBreakingNewsKarnatakaShivakumar PatilVijayasakshivijayasakshinews
Previous Post

ಸರ್ಕಾರಿ ಸವಲತ್ತುಗಳ ಸಮರ್ಪಕ ಬಳಕೆಯಾಗಲಿ

Next Post

ರಂಜಾನ್ ಹಬ್ಬದ ನಿಮಿತ್ತ ದಿನಸಿ ಕಿಟ್ ವಿತರಣೆ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ರಂಜಾನ್ ಹಬ್ಬದ ನಿಮಿತ್ತ ದಿನಸಿ ಕಿಟ್ ವಿತರಣೆ

ರಂಜಾನ್ ಹಬ್ಬದ ನಿಮಿತ್ತ ದಿನಸಿ ಕಿಟ್ ವಿತರಣೆ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಕೊನೆ ಕ್ಷಣದಲ್ಲಿ ಬದಲಾವಣೆ ಸಾಧ್ಯ: ದಾವಣಗೆರೆ ದಕ್ಷಿಣ ಟಿಕೆಟ್ ವಿವಾದಕ್ಕೆ ಯತ್ನಾಳ್‌ ಹೊಸ ಬಾಂಬ್‌

ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಸ್ಟಿಂಗ್ ವಿಡಿಯೋಗಳು ಹೊರಬರಬೇಕಿದೆ: ಯತ್ನಾಳ್ ಗಂಭೀರ ಆರೋಪ

October 24, 2026
ಸಿಎಂ ಸಿದ್ದರಾಮಯ್ಯ ನಿದ್ರಾದೇವಿಯ ವಶದಲ್ಲಿದ್ದಾರೆ: ಆರ್ ಅಶೋಕ್ ವ್ಯಂಗ್ಯ!

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ನಲ್ಲಿ ₹133 ಕೋಟಿ ಅಕ್ರಮದ ಆರೋಪ! ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link