Home Karnataka News ಅಯ್ಯಪ್ಪನ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ!

ಅಯ್ಯಪ್ಪನ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ!

0
ಅಯ್ಯಪ್ಪನ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ!
Spread the love

ಬೆಂಗಳೂರು:- ಅಯ್ಯಪ್ಪನ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕರ್ನಾಟಕದಿಂದ ಶಬರಿಮಲೆಗೆ ತೆರಳುವವರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆಯು ಹುಬ್ಬಳ್ಳಿ-ಕೊಲ್ಲಂ ಮತ್ತು ಬೆಳಗಾವಿ-ಕೊಲ್ಲಂ ನಿಲ್ದಾಣಗಳ ನಡುವೆ ಒಟ್ಟು ಆರು ಟ್ರಿಪ್‌ ವಿಶೇಷ ರೈಲುಗಳ ಸೇವೆಗೆ ಅವಕಾಶ ಕಲ್ಪಿಸಿದೆ.

ಹುಬ್ಬಳ್ಳಿ-ಕೊಲ್ಲಂ ಮತ್ತು ಬೆಳಗಾವಿ-ಕೊಲ್ಲಂ ನಿಲ್ದಾಣಗಳ ನಡುವೆ 6 ವಿಶೇಷ ರೈಲುಗಳ ಸೇವೆಯನ್ನು ನೈಋತ್ಯ ರೈಲ್ವೆ ಇಲಾಖೆಯು ವ್ಯವಸ್ಥೆ ಮಾಡಿದೆ.

ಡಿಸೆಂಬರ್ 5ರಿಂದ ಜನವರಿ 9ರವರೆಗೆ ಹುಬ್ಬಳ್ಳಿಯಿಂದ ಪ್ರತಿ ಗುರುವಾರ ಸಂಜೆ 5.30ಕ್ಕೆ ಹೊರಡಲಿದೆ. ಮರುದಿನ ಸಂಜೆ 4.30ಕ್ಕೆ ಕೊಲ್ಲಂ ತಲುಪಲಿದೆ.

ಡಿಸೆಂಬರ್ 6ರಿಂದ ಜನವರಿ 10ರವರೆಗೆ ರೈಲು ಸಂಖ್ಯೆ 07314 ಕೊಲ್ಲಂನಿಂದ ಪ್ರತಿ ಶುಕ್ರವಾರ ಸಂಜೆ 6.30ಕ್ಕೆ ಹೊರಡಲಿದ್ದು, ಮರುದಿನ ಸಂಜೆ 7.35ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ ತಲುಪಲಿದೆ.

ಈ ಎರಡೂ ರೈಲು ಮಾರ್ಗಗಳಲ್ಲಿ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಕಡೂರು, ಅರಸೀಕೆರೆ, ತುಮಕೂರು, ಎಸ್​ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ್, ಕಾಯಂಕುಲಂ ನಿಲ್ದಾಣಗಳಲ್ಲಿ ರೈಲು ನಿಲುಗಡೆಯಾಗಲಿದೆ.

ಡಿಸೆಂಬರ್ 9ರಿಂದ ಜನವರಿ 13ರವರೆಗೆ ರೈಲು ಸಂಖ್ಯೆ 07317 ಬೆಳಗಾವಿಯಿಂದ ಪ್ರತಿ ಸೋಮವಾರ ಮಧ್ಯಾಹ್ನ 2.30ಕ್ಕೆ ಹೊರಡಲಿದೆ. ಮರುದಿನ ಸಂಜೆ 4.30ಕ್ಕೆ ಕೊಲ್ಲಂ ತಲುಪಲಿದೆ.

ಡಿಸೆಂಬರ್ 10ರಿಂದ ಜನವರಿ 14ರವರೆಗೆ ರೈಲು ಸಂಖ್ಯೆ 07318 ಕೊಲ್ಲಂನಿಂದ ಪ್ರತಿ ಮಂಗಳವಾರ ಸಂಜೆ 6.30ಕ್ಕೆ ಹೊರಡಲಿದೆ. ಮರುದಿನ ರಾತ್ರಿ 10 ಗಂಟೆಗೆ ಬೆಳಗಾವಿ ತಲುಪಲಿದೆ.


Spread the love

LEAVE A REPLY

Please enter your comment!
Please enter your name here