ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲು ಅನುಮೋದನೆ ನೀಡಿದೆ.
ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ 2% ರಷ್ಟು ಡಿಎ ಏರಿಕೆ ಮಾಡಲಾಗಿತ್ತು. ಈಗ ಮೊತ್ತೊಮ್ಮೆ ಡಿಕೆ ಏರಿಕೆ ಮಾಡಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಇದು ಮೂಲ ವೇತನ/ಪಿಂಚಣಿಯ 55% ಹಾಲಿ ದರಕ್ಕಿಂತ 3% ಹೆಚ್ಚಳವಾಗಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ 1,0083.96 ಕೋಟಿ ರೂ.ಗಳ ಹೊರೆ ಬೀಳಲಿದೆ. 7ನೇ ಕೇಂದ್ರ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.



