ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘವು ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಸಿಹಿ ಸುದ್ದಿ ನೀಡಿದೆ.
ಲೀಟರ್ ಹಾಲಿನ ದರದಲ್ಲಿ 50 ಪೈಸೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಹೈನುಗಾರರಿಗೆ ಲಾಭವಾಗಲಿದೆ.
ಹೊಸ ವರ್ಷದ ಆರಂಭದಲ್ಲಿ ಜನವರಿ 1ರಂದು ಲೀಟರ್‌ಗೆ 1 ರೂಪಾಯಿ ಹೆಚ್ಚಳ ಮಾಡಿದ್ದ ಸಂಘವು ಇದೀಗ ಮತ್ತೊಮ್ಮೆ 50 ಪೈಸೆ ಹೆಚ್ಚಳ ಮಾಡಿದೆ. ಇದರ ಫಲವಾಗಿ ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ 36 ರೂಪಾಯಿ 40 ಪೈಸೆ ಲಭ್ಯವಾಗಲಿದೆ.
ಈ ಹೆಚ್ಚುವರಿ ದರ ಮೇ ತಿಂಗಳ ಅಂತ್ಯದವರೆಗೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಲಾಭಾಂಶವನ್ನು ಪರಿಗಣಿಸಿ ದರ ಹೆಚ್ಚಳವನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.



