ನವದೆಹಲಿ: ಚಿನ್ನ ಖರೀದಿದಾರರಿಗೆ ಸ್ವಲ್ಪ ನೆಮ್ಮದಿ ಸುದ್ದಿ ಸಿಕ್ಕಿದೆ.
ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದ್ದು, ಪ್ರತಿ ಗ್ರಾಮ್ಗೆ ಸುಮಾರು ₹35ರಷ್ಟು ಕಡಿಮೆಯಾಗಿದೆ.
ಕಳೆದ ಕೆಲವು ತಿಂಗಳಿಂದ ಚಿನ್ನದ ದರದಲ್ಲಿ ನಿರಂತರ ಏರಿಳಿತ ಮುಂದುವರಿದಿದ್ದು, ಇದೀಗ ಮತ್ತೆ ಬೆಲೆಯಲ್ಲಿ ಸಣ್ಣ ಮಟ್ಟಿನ ಬದಲಾವಣೆ ಕಂಡುಬಂದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,32,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,816 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ.



