ಬೆಂಗಳೂರು:- ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ದಿಢೀರ್ ಇಳಿಕೆ ಕಂಡಿದೆ.
ವಿದೇಶಗಳ ಮಾರುಕಟ್ಟೆಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಮಾತ್ರ ಇಂದು ತುಸು ಬದಲಾವಣೆ ಆಗಿದೆ. ಬೆಳ್ಳಿ ಬೆಲೆ ಜನವರಿ 14ರ ಬಳಿಕ ಮೊದಲ ಬಾರಿ ಇಳಿಕೆ ಆಗಿದೆ. ಸೋಮವಾರ ಗ್ರಾಮ್ಗೆ ಒಂದು ರೂ ಕಡಿಮೆ ಆಗಿದೆ.
ಬೆಂಗಳೂರಿನಲ್ಲಿ 97.50 ರೂ ಇದ್ದ ಬೆಳ್ಳಿ ಬೆಲೆ 96.50 ರೂಗೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 75,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 82,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 75,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,650 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ.