ಮಹಿಳಾ ಮಣಿಗಳಿಗೆ ಗುಡ್‌ ನ್ಯೂಸ್‌: 2 ತಿಂಗಳ ಗೃಹಲಕ್ಷ್ಮಿ ಹಣ ಈ ದಿನಾಂಕದಂದು ನಿಮ್ಮ ಖಾತೆಗೆ!

0
Spread the love

ಬೆಳಗಾವಿ: ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ.

Advertisement

ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.

ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹ ಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9ರಂದು ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣ ಹಾಕಲಾಗುವುದು ಎಂದು ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here