HomeKarnataka Newsಮಂಡ್ಯ ರೈತರಿಗೆ ಗುಡ್‌ನ್ಯೂಸ್..! ಕೆಆರ್‌ಎಸ್‌ಗೆ ಭರ್ಜರಿ ನೀರು; ಕಾವೇರಿ ಹೋರಾಟಕ್ಕೆ ಬೀಳುತ್ತಾ ಬ್ರೇಕ್?

ಮಂಡ್ಯ ರೈತರಿಗೆ ಗುಡ್‌ನ್ಯೂಸ್..! ಕೆಆರ್‌ಎಸ್‌ಗೆ ಭರ್ಜರಿ ನೀರು; ಕಾವೇರಿ ಹೋರಾಟಕ್ಕೆ ಬೀಳುತ್ತಾ ಬ್ರೇಕ್?

For Dai;y Updates Join Our whatsapp Group

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು ಇದೀಗ 17,427 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ಕೇವಲ ಎರಡು ದಿನಗಳ ಹಿಂದೆ 1,682 ಕ್ಯೂಸೆಕ್‌ನಷ್ಟಿದ್ದ ಒಳಹರಿವು ಹಲವು ಪಟ್ಟು ಹೆಚ್ಚಾಗಿರುವುದು ಮಂಡ್ಯ ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ. ಜತೆಗೆ, ಕಾವೇರಿ ನೀರು ಹಂಚಿಕೆ ವಿಚಾರದಲ್ಲೂ ಕರ್ನಾಟಕಕ್ಕೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ 109.75 ಅಡಿ ನೀರಿನ ಮಟ್ಟ ದಾಖಲಾಗಿದೆ. 49.452 ಟಿಎಂಸಿ ಒಟ್ಟು ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 31.471 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯದಿಂದ ಸದ್ಯ 4,514 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಇದೇ ರೀತಿ ಮಳೆ ಮುಂದುವರಿದು ಒಳಹರಿವು ಹೆಚ್ಚಾದರೆ, ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ಬೀಳುವ ಸಾಧ್ಯತೆಯಿದೆ. ಹೆಚ್ಚಿನ ನೀರು ಸಂಗ್ರಹವಾದರೆ ಮಂಡ್ಯ ಜಿಲ್ಲೆಯ ರೈತರ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುವ ನಿರೀಕ್ಷೆಯಿದೆ.

ಇನ್ನೊಂದೆಡೆ, ರಾಜ್ಯ ಸರ್ಕಾರ ಸದ್ಯ ನಾಲ್ಕು ಕಟ್ಟು ಪದ್ಧತಿಯಲ್ಲಿ ಮಾತ್ರ ನೀರು ಪೂರೈಸುವುದಾಗಿ ತಿಳಿಸಿದ್ದು, ಭತ್ತ ಮತ್ತು ಕಬ್ಬು ಬೆಳೆಯದಂತೆ ರೈತರಿಗೆ ಮನವಿ ಮಾಡಿದೆ. ಆದರೆ ಕೆಆರ್‌ಎಸ್‌ಗೆ ಒಳಹರಿವು ಇದೇ ಪ್ರಮಾಣದಲ್ಲಿ ಮುಂದುವರಿದರೆ ಕೃಷಿಗೆ ಹೆಚ್ಚಿನ ನೀರು ಲಭ್ಯವಾಗುವ ನಿರೀಕ್ಷೆ ರೈತರಲ್ಲಿದೆ.

ಕಬಿನಿ ಜಲಾಶಯಕ್ಕೂ ಉತ್ತಮ ಒಳಹರಿವು:

ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೂ ಉತ್ತಮ ಒಳಹರಿವು ಮುಂದುವರಿದಿದೆ. 84 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 72.76 ಅಡಿ ನೀರಿನ ಮಟ್ಟವಿದೆ.

ಕಬಿನಿಯಲ್ಲಿ 13.07 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳಹರಿವು 7,676 ಕ್ಯೂಸೆಕ್ನಷ್ಟಿದೆ. ನದಿ ಹಾಗೂ ವಿವಿಧ ಕಾಲುವೆಗಳಿಗೆ ಒಟ್ಟು 7,760 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ ನದಿಗೆ 6,100 ಕ್ಯೂಸೆಕ್ ಹಾಗೂ ಕಾಲುವೆಗಳಿಗೆ 1,660 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಇತರೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ:

ಕೆಆರ್‌ಎಸ್ ಜಲಾಶಯ

  • ಗರಿಷ್ಠ ಮಟ್ಟ: 124.80 ಅಡಿ
  • ಪ್ರಸ್ತುತ ಮಟ್ಟ: 109.75 ಅಡಿ
  • ಒಳಹರಿವು: 17,427 ಕ್ಯೂಸೆಕ್
  • ಹೊರಹರಿವು: 4,514 ಕ್ಯೂಸೆಕ್
  • ಒಟ್ಟು ಸಾಮರ್ಥ್ಯ: 49.452 ಟಿಎಂಸಿ
  • ಪ್ರಸ್ತುತ ಸಂಗ್ರಹ: 31.471 ಟಿಎಂಸಿ

ಕಬಿನಿ ಜಲಾಶಯ

  • ಗರಿಷ್ಠ ಮಟ್ಟ: 84 ಅಡಿ
  • ಪ್ರಸ್ತುತ ಮಟ್ಟ: 72.76 ಅಡಿ
  • ಸಂಗ್ರಹ: 13.07 ಟಿಎಂಸಿ
  • ಒಳಹರಿವು: 7,676 ಕ್ಯೂಸೆಕ್
  • ನದಿಗೆ ಹೊರಹರಿವು: 6,100 ಕ್ಯೂಸೆಕ್
  • ಕಾಲುವೆಗಳಿಗೆ ಹೊರಹರಿವು: 1,660 ಕ್ಯೂಸೆಕ್
  • ಒಟ್ಟು ಹೊರಹರಿವು: 7,760 ಕ್ಯೂಸೆಕ್

ತುಂಗಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 1,633 ಅಡಿ
  • ಪ್ರಸ್ತುತ ಮಟ್ಟ: 1,630.41 ಅಡಿ
  • ಒಟ್ಟು ಸಾಮರ್ಥ್ಯ: 105.788 ಟಿಎಂಸಿ
  • ಪ್ರಸ್ತುತ ಸಂಗ್ರಹ: 95.619 ಟಿಎಂಸಿ
  • ತಕ್ಷಣದ ಒಳಹರಿವು: 14,525 ಕ್ಯೂಸೆಕ್
  • ಕಳೆದ 24 ಗಂಟೆಗಳ ಸರಾಸರಿ ಒಳಹರಿವು: 15,952 ಕ್ಯೂಸೆಕ್
  • ಹೊರಹರಿವು: 8,551 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಪ್ರಸ್ತುತ ಮಟ್ಟ: 1,797.20 ಅಡಿ
  • ಒಳಹರಿವು: 9,245 ಕ್ಯೂಸೆಕ್
  • ಲೈವ್ ಸ್ಟೋರೇಜ್: 58.83%
  • ಇಂದಿನ ಏರಿಕೆ: 0.20 ಅಡಿ

ಹೇಮಾವತಿ ಜಲಾಶಯ

  • ಗರಿಷ್ಠ ಮಟ್ಟ: 2,922 ಅಡಿ
  • ಪ್ರಸ್ತುತ ಮಟ್ಟ: 2,914.30 ಅಡಿ
  • ಪ್ರಸ್ತುತ ಸಂಗ್ರಹ: 30.092 ಟಿಎಂಸಿ
  • ಒಳಹರಿವು: 2,210 ಕ್ಯೂಸೆಕ್
  • ನದಿಗೆ ಹೊರಹರಿವು: 1,800 ಕ್ಯೂಸೆಕ್
  • ಕಾಲುವೆಗೆ ಹೊರಹರಿವು: 3,700 ಕ್ಯೂಸೆಕ್

ಒಟ್ಟಾರೆ ರಾಜ್ಯದ ಪ್ರಮುಖ ಜಲಾಶಯಗಳಿಗೆ ಉತ್ತಮ ಒಳಹರಿವು ಮುಂದುವರಿದಿದ್ದು, ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ರೈತರಲ್ಲಿ ಆಶಾಭಾವನೆ ಮೂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img