ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದೆ.
ಶೀಘ್ರವೇ ಪಿಂಕ್ ಲೈನ್ ಮೆಟ್ರೋ ಟ್ರ್ಯಾಕ್‌ಗೆ ಇಳಿಯಲಿದ್ದು, ನಾಳೆಯಿಂದ ರೋಲಿಂಗ್ ಸ್ಟಾಕ್ ಪರೀಕ್ಷೆಗಳು ಆರಂಭವಾಗಲಿವೆ. ಈ ಪರೀಕ್ಷೆಗಳ ಮೂಲಕ ಸಿಗ್ನಲಿಂಗ್ ವ್ಯವಸ್ಥೆ, ಬ್ರೇಕ್ ಕಾರ್ಯಕ್ಷಮತೆ, ರೈಲಿನ ವೇಗ, ವಿದ್ಯುತ್ ಹಾಗೂ ದೂರಸಂಪರ್ಕ ವ್ಯವಸ್ಥೆಗಳ ಸಮಗ್ರ ಪರಿಶೀಲನೆ ನಡೆಸಲಾಗುತ್ತದೆ.
ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಸುಮಾರು 7.5 ಕಿ.ಮೀ ಉದ್ದದ ಪಿಂಕ್ ಲೈನ್ ಮಾರ್ಗದಲ್ಲಿ ರೋಲಿಂಗ್ ಸ್ಟಾಕ್ ಟೆಸ್ಟ್ ನಡೆಯಲಿದ್ದು, ಜ.11ರಿಂದ ಏಪ್ರಿಲ್ ಮಧ್ಯಭಾಗದವರೆಗೆ ಮುಂದುವರೆಯಲಿದೆ. ವಾಣಿಜ್ಯ ಸಂಚಾರ ಆರಂಭಿಸುವ ಮೊದಲು ಕೈಗೊಳ್ಳಲಾಗುವ ಅತ್ಯಂತ ಮಹತ್ವದ ಹಂತವಾಗಿರುವ ಈ ಪರೀಕ್ಷೆಗಳು, ಮೆಟ್ರೋ ರೈಲುಗಳ ಕಾರ್ಯಕ್ಷಮತೆ ಹಾಗೂ ವಿವಿಧ ವ್ಯವಸ್ಥೆಗಳ ಪರಸ್ಪರ ಸಂಯೋಜನೆಯ ಸಂಪೂರ್ಣ ಮೌಲ್ಯಮಾಪನಕ್ಕೆ ನೆರವಾಗಲಿವೆ. ಅನುಮೋದನೆ ಪಡೆಯಲು ಈ ಪರೀಕ್ಷೆಗಳು ಅಗತ್ಯವಾಗಿವೆ.



