SSLC, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್’ನ್ಯೂಸ್..!

0
Spread the love

ಬೆಂಗಳೂರು: ಎಸ್​ಎಸ್​ಎಲ್​ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜನ್ಸಿಗಳ ಮೂಲಕ ಅರ್ಹ ವಿಧ್ಯಾರ್ಥಿಗಳ ಮನೆಗಳಿಗೆ ವಾಹನ ತಲುಪಿಸುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಭರವಸೆ ನೀಡಿದರು. ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,

Advertisement

ಎಷ್ಟು ದಿನ ನಾನು ಸಚಿವನಾಗಿ ಇರುತ್ತೇನೋ ಇಲ್ವೋ ಗೊತ್ತಿಲ್ಲ. ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ಯಾಕಂದ್ರೆ ದೇವರು ಹಣೆ ಬರಹ ಬರೆದಿರುತ್ತಾನೆ. ಮುಂದೆ ನಾನು ಮಂತ್ರಿ ಆಗ್ತಿನೋ, ಇರ್ತಿನೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಮಂತ್ರಿ ಆಗಿ ಇರ್ತಿನಿ ಅನ್ನೋ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಈ ಮೂಲಕ ಜಮೀರ್ ಸಂಪುಟ ಸರ್ಜರಿ ಹಾಗೂ ಖಾತೆ ಬದಲಾವಣೆ ವಿಚಾರಕ್ಕೆ ಪುಷ್ಟಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here