ಪ್ರಯಾಣಿಕರಿಗೆ ಗುಡ್ ನ್ಯೂಸ್: ದಸರಾಕ್ಕೆ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ

0
Spread the love

ಮೈಸೂರು:– ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ.

Advertisement

ದಸರಾ ಸಂಭ್ರಮ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾಧಿಗಳು ಮೈಸೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ KSRTC 280 ಹೆಚ್ಚುವರಿ ಬಸ್ಸುಗಳನ್ನು ನಿಯೋಜನೆ ಮಾಡಿದೆ.ದಸರಾ ಪ್ರಯುಕ್ತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಸೆ.25ರಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು.

ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಿಂದ ಒಟ್ಟು 280 ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಈ ಸಂದರ್ಭದಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ, ಮುಖ್ಯ ಸಂಚಾರ ವ್ಯವಸ್ಥಾಪಕರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೆಂಪೇಗೌಡ ಬಸ್ ನಿಲ್ದಾಣ, ವಿಭಾಗೀಯ ನಿಯಂತ್ರಣಾಧಿಕಾರಿ ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here