ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಗೆ ಭರ್ಜರಿಯಾಗಿ ಸಿದ್ಧತೆ ನಡೆಯುತ್ತಿದೆ. ಈ ಬಾರಿಯ ದಸರಾ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿದೆ. ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್ ದೀಪಾಲಂಕಾರ ಆಯೋಜನೆ ಮಾಡಲಾಗುತ್ತಿದೆ. ದಸರಾ ಮುಗಿದ ಬಳಿಕವೂ ಹತ್ತು ದಿನ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗುತ್ತದೆ.
Advertisement
ಇದರ ಬೆನ್ನಲ್ಲೇ ಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ.
ಹೆಚ್ಚು ಬೋಗಿಗಳನ್ನ ಜೋಡಿಸುವ ರೈಲುಗಳ ವಿವರ
- 9 ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್
- ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್
- ಅಕ್ಟೋಬರ್ 1 ರಿಂದ 12ರವರೆಗೆ ರೈಲು ಸಂಖ್ಯೆ 17302 ಬೆಳಗಾವಿ-ಮೈಸೂರು ಎಕ್ಸಪ್ರೆಸ್
- ಅಕ್ಟೋಬರ್ 2 ರಿಂದ 13ರವರೆಗೆ ರೈಲು ಸಂಖ್ಯೆ 06233/06234 ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್
- ಅಕ್ಟೋಬರ್ 2 ರಿಂದ 13ರವರೆಗೆ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್
- ಅಕ್ಟೋಬರ್ 3 ರಿಂದ 14ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸಪ್ರೆಸ್
- ಅಕ್ಟೋಬರ್ 1 ರಿಂದ 12 ರವರೆಗೆ ರೈಲು ಸಂಖ್ಯೆ 16591 ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸಪ್ರೆಸ್.
- ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 16592 ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸಪ್ರೆಸ್
- ಅಕ್ಟೋಬರ್ 2 ರಿಂದ 13 ರವರೆಗೆ ರೈಲು ಸಂಖ್ಯೆ 16535 ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸಪ್ರೆಸ್
- ಅಕ್ಟೋಬರ್ 3 ರಿಂದ 14 ರವರೆಗೆ ರೈಲು ಸಂಖ್ಯೆ 16536 ಪಂಢರಪುರ ಗೋಲಗುಂಬಜ್ ಎಕ್ಸಪ್ರೆಸ್
- 2 ರೈಲಿಗೆ ತಲಾ ಎರಡು ಸ್ಲೀಪರ್ ಕ್ಲಾಸ್
- ಅಕ್ಟೋಬರ್ 3 ರಿಂದ 12ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್
- ಅಕ್ಟೋಬರ್ 4 ರಿಂದ 13ರವರೆಗೆ ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್