HomeKarnataka NewsDCRE ಘಟಕದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ

DCRE ಘಟಕದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ

ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಹುದ್ದೆಯ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡುವಂತೆ ಮಹತ್ವದ ಆದೇಶ ಹೊರಡಿಸಲಾಗಿದೆ.

ನಿರಂತರ ಕರ್ತವ್ಯ ನಿರ್ವಹಣೆಯಿಂದ ಒತ್ತಡಕ್ಕೆ ಒಳಗಾಗುತ್ತಿದ್ದ ಸಿಬ್ಬಂದಿಗೆ ವಿಶ್ರಾಂತಿ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಡಿಸಿಆರ್‌ಇ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗೆ ವಾರಕ್ಕೊಮ್ಮೆ ರಜೆ ಪಡೆಯುವ ಅವಕಾಶ ದೊರೆಯಲಿದೆ.

ಆದೇಶದಲ್ಲಿ ಏನಿದೆ?

2021ರ ಆಗಸ್ಟ್ 3ರಂದು ಪೊಲೀಸ್ ಪ್ರಧಾನ ಕಚೇರಿ ಹೊರಡಿಸಿದ್ದ ಸುತ್ತೋಲೆ ಸಂಖ್ಯೆ ಆರ್‌ಎಲ್‌ಎನ್-1/14/2021 ಅನ್ನು ಉಲ್ಲೇಖಿಸಿ ಈ ನಿರ್ದೇಶನ ನೀಡಲಾಗಿದೆ. ಡಿಸಿಆರ್‌ಇ ಕಂಟ್ರೋಲ್ ರೂಮ್‌ನಿಂದ ಅಧಿಕೃತ ಸಂದೇಶದ ಮೂಲಕ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.

ಆದೇಶದ ಪ್ರಕಾರ, ಪಾಳಿ (ಶಿಫ್ಟ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೂ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ರಜೆ ನೀಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಈ ಕ್ರಮದಿಂದಾಗಿ ಸಿಬ್ಬಂದಿಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ. ಜೊತೆಗೆ, ಹೆಚ್ಚಿನ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸಮರ್ಪಕ ವಿಶ್ರಾಂತಿ ದೊರೆಯಲಿದೆ ಎಂದು ಇಲಾಖೆ ತಿಳಿಸಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರು ಜುಲೈ 16ರಂದು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಬಳಿಕ ಆದೇಶದ ಪ್ರತಿಗಳನ್ನು ಡಿಸಿಆರ್‌ಇ ವಲಯದ ಎಲ್ಲಾ ಪೊಲೀಸ್ ಅಧೀಕ್ಷಕರು, ಆಡಳಿತಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img