HomeKarnataka Newsಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರೀ-ಎಗ್ಜಾಮ್ ವೇಳಾಪಟ್ಟಿ ಬಿಡುಗಡೆ!

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರೀ-ಎಗ್ಜಾಮ್ ವೇಳಾಪಟ್ಟಿ ಬಿಡುಗಡೆ!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶವನ್ನು ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಇದರೊಂದಿಗೆ ಫೇಲಾದ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30ರಿಂದ ಮೇ 13ರವರೆಗೆ ನಡೆಯಲಿವೆ. ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ-2 ಬಹುತೇಕ ವಿಷಯಗಳಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು, ಕೆಲವು ತಾಂತ್ರಿಕ ಹಾಗೂ ವೃತ್ತಿಪರ ವಿಷಯಗಳಿಗೆ ಮಧ್ಯಾಹ್ನ ವೇಳೆಯಲ್ಲಿ ಪರೀಕ್ಷೆಗಳು ನಿಗದಿಯಾಗಿವೆ. ಈ ಬಾರಿ ಮೂರನೇ ಪರೀಕ್ಷೆ (Exam-3) ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ-2 ವೇಳಾಪಟ್ಟಿ:
ಏಪ್ರಿಲ್ 30 – ಕನ್ನಡ, ಅರೇಬಿಕ್
ಮೇ 02 – ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಶಾಸ್ತ್ರ
ಮೇ 04 – ಇಂಗ್ಲೀಷ್
ಮೇ 05 – ವ್ಯವಹಾರ ಅಧ್ಯಯನ, ಗೃಹಶಾಸ್ತ್ರ, ಶಿಕ್ಷಣಶಾಸ್ತ್ರ
ಮೇ 06 – ಅರ್ಥಶಾಸ್ತ್ರ, ಜೀವಶಾಸ್ತ್ರ
ಮೇ 07 – ಇತಿಹಾಸ, ಗಣಿತ, ಭೌತಶಾಸ್ತ್ರ
ಮೇ 08 – ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 09 – ಹಿಂದಿ
ಮೇ 11 – ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 12 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲ ಗಣಿತ
ಮೇ 13 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮೇ 13 (ಮಧ್ಯಾಹ್ನ) – ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್, ಯಂತ್ರಾಂಶ, ಉಡುಪು ತಯಾರಿಕೆ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ & ವೆಲ್‌ನೆಸ್

ಇದೇ ವೇಳೆ, ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ 1217 ಕೇಂದ್ರಗಳಲ್ಲಿ ನಡೆದಿತ್ತು. ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಸೈನ್ಸ್ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!