HomeKarnataka Newsವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಹಣ ನೀಡಿ ಪಡೆದ ಬಸ್ ಪಾಸ್ ಮೊತ್ತ ಮರುಪಾವತಿಗೆ ಸರ್ಕಾರ ಆದೇಶ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಹಣ ನೀಡಿ ಪಡೆದ ಬಸ್ ಪಾಸ್ ಮೊತ್ತ ಮರುಪಾವತಿಗೆ ಸರ್ಕಾರ ಆದೇಶ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ನಾಲ್ಕು ರಸ್ತೆ ಸಾರಿಗೆ ನಿಗಮಗಳು ಮತ್ತೊಂದು ಸಿಹಿಸುದ್ದಿ ನೀಡಿವೆ.

ಉಚಿತ ಬಸ್ ಪಾಸ್ ಯೋಜನೆ ಜಾರಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ಮರುಪಾವತಿಸಲು ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಪಾವತಿಸಿದ ಬಸ್ ಪಾಸ್ ಶುಲ್ಕವನ್ನು ಹಿಂದಿರುಗಿಸಲು ಕ್ರಮ ಕೈಗೊಂಡಿವೆ.

ಉಚಿತ ಬಸ್ ಪಾಸ್ ಯೋಜನೆಯ ಪ್ರಯೋಜನ ರಾಜ್ಯದ ಗಡಿಭಾಗಗಳಲ್ಲಿ ವಾಸವಿದ್ದು ನೆರೆಯ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ, ನೆರೆಯ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.

ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಮರುಪಾವತಿ ಪಡೆಯಬಹುದು. ಅರ್ಜಿ ಸಲ್ಲಿಸಲು ಒಟಿಪಿ ಆಧಾರಿತ ನೋಂದಣಿ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಬೇಕು. ಅರ್ಜಿ ಪರಿಶೀಲನೆಯಾದ ಬಳಿಕ ಎನ್‌ಇಎಫ್‌ಟಿ ಅಥವಾ ಆರ್‌ಟಿಜಿಎಸ್ ಮೂಲಕ ಏಳು ದಿನಗಳೊಳಗೆ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದ್ದರು. ಅದರಂತೆ ಯೋಜನೆ ಜಾರಿಯಾಗಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಮುಂದಾಗಿದೆ.

ಸರ್ಕಾರದ ಅಂದಾಜಿನ ಪ್ರಕಾರ, ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸುಮಾರು 286.08 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದರ ಜೊತೆಗೆ ಬಸ್ ಪಾಸ್ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಸೇರಿದಂತೆ ಸುಮಾರು 15 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

2026-27ನೇ ಶೈಕ್ಷಣಿಕ ವರ್ಷದಲ್ಲಿ ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವ ಮೊದಲು ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದಿದ್ದ 19,792 ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಮರುಪಾವತಿಸಲು ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!