ವಾಣಿಜ್ಯ ವಲಯದವರಿಗೆ ಗುಡ್ ನ್ಯೂಸ್: LPG ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ!

0
Spread the love

ನವದೆಹಲಿ:– 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಈ ಮೂಲಕ ವಾಣಿಜ್ಯ ವಲಯದವರಿಗೆ ಬೆಳ್ಳಂಬೆಳಗ್ಗೆ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ.

Advertisement

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಅಡುಗೆ ತಯಾರಕರು ನಿಟ್ಟುಸಿರು ಬಿಡುವಂತಾಗಿದೆ. 14.2 ಕೆಜಿ ದೇಶೀಯ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಲಾಗಿದೆ.


Spread the love

LEAVE A REPLY

Please enter your comment!
Please enter your name here