ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ತರ್ಕಬದ್ಧಗೊಳಿಸಿ 5000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಅದಲ್ಲದೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಇನ್ನೂ ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ.
ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು. ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು..